ಹುದ್ದೆಗಳ ವಿವರ:
1) ಶುಶ್ರೂಷಣಾಧಿಕಾರಿ - 20 ಹುದ್ದೆಗಳು
2) ಫಾರ್ಮಾಸಿ ಅಧಿಕಾರಿ - 51 ಹುದ್ದೆಗಳು
3) ಕಿರಿಯ ಪ್ರಯೋಗಶಾಲಾ ಟೆಕ್ನಾಲಾಜಿಸ್ಟ್ - 17 ಹುದ್ದೆಗಳು
ನೇಮಕಾತಿ ವಿಧಾನ:
ಮೇಲ್ಕಂಡ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರನೇಮಕಾತಿ ವಿಧಾನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ?
ಈ ನೇಮಕಾತಿಗೆ ಯಾವುದೇ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ನೇರವಾಗಿ ಸಂದರ್ಶನಕ್ಕೆ ಹಾಜರಾಗಬೇಕಾಗುತ್ತದೆ.
ಸಂದರ್ಶನ ನಡೆಯುವ ದಿನಾಂಕ:
ಶುಶ್ರೂಷಣಾಧಿಕಾರಿ ಹುದ್ದೆಗೆ ಜುಲೈ 21ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಸಲಾಗುತ್ತದೆ.
ಫಾರ್ಮಾಸಿ ಅಧಿಕಾರಿ ಹುದ್ದೆಗೆ ಜುಲೈ 21ರಂದು ಮಧ್ಯಾಹ್ನ 2.30ಕ್ಕೆ ಸಂದರ್ಶನ ನಡೆಸಲಾಗುತ್ತದೆ.
ಕಿರಿಯ ಪ್ರಯೋಗಶಾಲಾ ಟೆಕ್ನಾಲಾಜಿಸ್ಟ್ ಹುದ್ದೆಗೆ ಜುಲೈ 22ರ ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಸಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ:
ನೇರ ಸಂದರ್ಶನವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಎಲ್ಲಾ ದಾಖಲೆ ಪತ್ರದೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕಾಗಿ ಕೋರಲಾಗಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 08182-222382 ಈ ದೂರವಾಣಿ ಸಂಖ್ಯೆಗೆ ಕರೆಯನ್ನು ಮಾಡಬಹುದಾಗಿದೆ.
Post a Comment
0 Comments